ಸುಂಟಿಕೊಪ್ಪ, ಜು. 12: ಸುಂಟಿಕೊಪ್ಪ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ 2018-19 ಸಾಲಿನ ಪ್ರಚಾರ ಕಾರ್ಯಕ್ರಮ ಸಮಾರೋಪ ಸಮಾರಂಭ ತಾ. 13 (ಇಂದು) ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ, ಕೃಷಿಕರಿಗಾಗಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾನೀಯ ಸಮಿತಿ ಅಧ್ಯಕ್ಷೆ ಸರೋಜಮ್ಮ ನೆರವೇರಿಸಲಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ವಹಿಸಲಿದ್ದಾರೆ.