ನಾಪೋಕ್ಲು, ಜು. 13: ಸಮಾಜದ ಕಟ್ಟಕಡೆಯ ಮಹಿಳೆಯ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿ ಜ್ಞಾನ ವಿಕಾಸ ಯೋಜನೆಯನ್ನು ಆರಂಭಿಸಿ ಯಶಸ್ವಿಯಾಗಿದೆ ಎಂದು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಂತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯ ವತಿಯಿಂದ ಕಕ್ಕಬೆಯ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಪಾಡಿ ಇಗ್ಗುತ್ತಪ್ಪ ದೇವಾಲಯದ ಅರ್ಚಕ ಕುಶಭಟ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿ ಉಮಾ, ವಲಯ ಮೇಲ್ವಿಚಾರಕ ಕೆ. ಚೇತನ್ ಪಾಲ್ಗೊಂಡಿದ್ದರು. ಒಕ್ಕೂಟದ ಪದಾಧಿಕಾರಿಗಳು, ಜ್ಞಾನ ವಿಕಾಸ ಸಂಯೋಜಕರು, ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಭಾಗ್ಯ ಕಾರ್ಯಕ್ರಮ ನಿರೂಪಿಸಿ, ಸರೋಜಿನಿ ವಂದಿಸಿದರು.