ಮಡಿಕೇರಿ, ಜು. 16: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿ ಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಡಿಪ್ಲೋಮೊ ಲ್ಯಾಟರಲ್ ಎಂಟ್ರಿ (ಇಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ. ಕೋರ್ಸ್ಗಳಾದ ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ,ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತದೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸಿ.ಇ.ಟಿ. ಮೂಲಕ ಸೀಟು ಪಡೆದು ಡಿಪ್ಲೋಮೊ ಲ್ಯಾಟರಲ್ ಎಂಟ್ರಿ (ಇಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ.ಕೋರ್ಸ್ಗಳಾದ ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್., ಎಂ.ಇ., ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದೇ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಸ್ವೀಕೃತಗೊಂಡ ಅರ್ಜಿಗಳಲ್ಲಿ ಅನುದಾನ ಲಭ್ಯತೆ, ಸರ್ಕಾರದ ಆದೇಶದನ್ವಯ ಪ್ರವರ್ಗವಾರು 70:30ರ ಅನುಪಾತ ಹಾಗೂ ರ್ಯಾಂಕ್ವಾರು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್ಸೈಟ್ನಲ್ಲಿ ಲಭ್ಯವಿರುವ Useಡಿಟಿಚಿme iಟಿಜಿಡಿಚಿ\ಜbಛಿಜಛಿಚಿಡಿivu ಮತ್ತು Pಚಿssತಿಚಿಡಿಜ ಆಃ(ಜ#098 ನ್ನು ನಮೂದಿಸಿ ಅರ್ಜಿಯನ್ನು ಆನ್ಲೈನ್ನಲ್ಲಿ ಭರ್ತಿ ಮಾಡುವದು. ಜೊತೆಗೆ ದಾಖಲೆಗಳನ್ನು Sಛಿಚಿಟಿ ಮಾಡಿ ಅರ್ಜಿಯೊಂದಿಗೆ ಆನ್ಲೈನ್ನಲ್ಲಿ ತಾ. 31 ರೊಳಗೆ ಸಲ್ಲಿಸುವದು.
ವಿದ್ಯಾರ್ಥಿಯು ಒಂದಕ್ಕಿಂತ ಹೆಚ್ಚಿನ ಜಿಲ್ಲೆಯಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವದು. ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಿ.ಇ.ಟಿ. ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಭರ್ತಿ ಮಾಡುವದು.
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್ಗಳನ್ನು ಹೊರತುಪಡಿಸಿದ ಕೋರ್ಸ್ಗಳಾದ ಪಿ.ಹೆಚ್.ಡಿ., ಬಿ.ಸಿ.ಎ., ಎಂ.ಸಿ.ಎ., ಎಂ.ಎಸ್. ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿಎಸ್ಸಿ ಪ್ಯಾರಾ ಮೆಡಿಕಲ್, ಬಿ.ಎಸ್ಸಿ ಬಯೋ ಟೆಕ್ನಾಲಜಿ, ಬಿ.ಟೆಕ್, ಬಿ.ಪಿ.ಟಿ., ಜಿ.ಎನ್.ಎಂ., ಬಿ.ಎಚ್.ಎಂ., ಎಂ.ಡಿ.ಎಸ್, ಎಂ.ಎಸ್.ಡಬ್ಲ್ಯೂ., ಎಲ್. ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ ಬಯೋಟೆಕ್ನಾಲಜಿ., ಎಂ.ಎಸ್ಸಿ. ಎಜಿ., ಎಂ.ಡಿ.ಎಸ್., ಎಂ.ಎಸ್. ಡಬ್ಲ್ಯೂ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ. ಬಯೋ ಟೆಕ್ನಾಲಜಿ., ಎಂ.ಎಸ್ಸಿ. ಎಜಿ., ಈ ಕೋರ್ಸ್ಗಳಿಗೆ 2018-19 ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ತಾ. 25 ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 4 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್ ಕೋರ್ಸ್ ರಸ್ತೆ, ಮಡಿಕೇರಿ ಈ ವಿಳಾಸದಲ್ಲಿ ಅಥವಾ ದೂರವಾಣಿ ಸಂಖ್ಯೆ: 08272-221656 ಮೂಲಕ ಸಂಪರ್ಕಿಸಬಹುದು.