ಗೋಣಿಕೊಪ್ಪಲು. ಜು. 16. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಾ.19ರಂದು ಕೊಡಗು ಜಿಲ್ಲೆಗೆ ಅಧಿಕೃತ ಭೇಟಿ ನೀಡುವ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಜಿಲ್ಲಾ ಪದಾಧಿಕಾರಿಗಳ, ರಾಜ್ಯ ಸಮಿತಿಯನ್ನು ಪ್ರತಿನಿಧಿಸುವ ಪದಾಧಿಕಾರಗಳ ಕ್ಷೇತ್ರ ಸಮಿತಿ ಅಧ್ಯಕ್ಷರುಗಳ, ವಿವಿಧ ಘಟಕಗಳ ಅಧ್ಯಕ್ಷ, ಪದಾಧಿಕಾರಿಗಳ ಮುಖಂಡರ ಸಭೆಯನ್ನು ಮಡಿಕೇರಿಯ ಕೊಹಿನೂರು ರಸ್ತೆಯಲ್ಲಿರುವ ಚೇಂಬರ್ಸ್ ಆಫ್ ಕಾಮರ್ಸ್‍ನ ಸಭಾಂಗಣದಲ್ಲಿ ತಾ. 17 (ಇಂದು) ರಂದು ಸಂಜೆ 4 ಘಂಟೆಗೆ ಆಯೋಜಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.