ಮೂರ್ನಾಡು, ಜು. 16: ಇಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಸರಕಾರದಿಂದ ನೀಡುವ ಉಚಿತ ನೋಟ್ ಪುಸ್ತಕಗಳನ್ನು ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ ವಿದ್ಯಾರ್ಥಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾಭ್ಯಾಸಕ್ಕಾಗಿ ಸರಕಾರ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ಪ್ರತಿಯೊಂದು ಸವಲತ್ತುಗಳನ್ನು ನೀಡುತ್ತಿದೆ. ವಿದ್ಯಾರ್ಥಿ ಜೀವನದಲ್ಲಿ ಇವುಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣವನ್ನು ಪಡೆದು ಸಾಧನೆ ಗೈಯುವಲ್ಲಿ ಶ್ರಮಪಡಬೇಕು ಎಂದು ಕರೆ ನೀಡಿದರು.

ನಿಲಯದ 20 ಮಂದಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ನಿಲಯದ ಮೇಲ್ವಿಚಾರಕ ಎನ್.ಎನ್. ವೀರಣ್ಣ, ಸಿಬ್ಬಂದಿ ವರ್ಗದವರು ಹಾಜರಿದ್ದರು.