ಸೋಮವಾರಪೇಟೆ, ಜು. 17: ಸಮೀಪದ ಕುಸುಬೂರು ಕಾಫಿ ತೋಟದಲ್ಲಿ ಟ್ರ್ಯಾಕ್ಟರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮುತ್ತಯ್ಯ (57) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಸೇರಿದಂತೆ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಮೆಣಸದಲ್ಲಿ ನಡೆಯಿತು.