ಶ್ರೀಮಂಗಲ, ಜು. 17: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ಪರಕಟಕೇರಿ ಗ್ರಾಮದ ವಾರ್ಡ್‍ಸಭೆ ತಾ. 18 ರಂದು (ಇಂದು) ಗ್ರಾ.ಪಂ. ಸದಸ್ಯೆ ಕೆ.ವಿ. ಪುಷ್ಪ ಅಧ್ಯಕ್ಷತೆಯಲ್ಲಿ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಬಿರುನಾಣಿ ಗ್ರಾಮದ ವಾರ್ಡ್‍ಸಭೆ ಗ್ರಾ.ಪಂ. ಅಧ್ಯಕ್ಷ ಬಿ.ಕೆ. ನಾಣಯ್ಯ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಕಟ್ಟಡದಲ್ಲಿ ಅಪರಾಹ್ನ 2.30 ಗಂಟೆಗೆ ನಡೆಯಲಿದೆ.