ನಾಪೆÇೀಕ್ಲು, ಜು. 18: ಗ್ರಾಮೀಣ ಜನರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಡ ರೋಗಿಗಳಿಗೆ ವೈದ್ಯರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಕ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಸಲಹೆ ನೀಡಿದರು.

ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ರಕ್ಷಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿಲ್ಲದ ಔಷಧಿಗಳನ್ನು ಜಿಲ್ಲಾಸ್ಪತ್ರೆಗಳಿಂದ ಪಡೆದುಕೊಳ್ಳಬೇಕು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡುವ ಕೆಲಸ ಮಾಡಬೇಕು. ಯಾವದಕ್ಕೂ ವೈದ್ಯರು ಮತ್ತು ಸಿಬ್ಬಂದಿಗಳು ಉದಾಸಿನ ಮನೋಭಾವವನ್ನು ಪ್ರದರ್ಶಿಸಬಾರದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾಪ್ರಭು, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಶಿವಪ್ಪ, ಉಪಾಧ್ಯಕ್ಷ ಮುಂಡ್ಯೋಳಂಡ ರವಿ ಸೋಮಣ್ಣ, ಕಕ್ಕಬ್ಬೆ - ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ಸದಸ್ಯರಾದ ಬಿಳಿಯಂಡ್ರ ರವಿ ಕುಮಾರ್, ಶಾಂತಿ, ತಾಲೂಕು ವೈದ್ಯಾಧಿಕಾರಿ ಡಾ|| ಪಾರ್ವತಿ, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ|| ಪಲ್ಲವಿ ಇದ್ದರು.