ಮಡಿಕೇರಿ, ಜು. 18: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿ ಕಾರಿಯಾಗಿ ಡಾ. ಜಿ.ಎಲ್. ಪ್ರವೀಣ್ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿ ಕೊಂಡಿದ್ದಾರೆ. ಡಾ. ಜಿ.ಎಲ್. ಪ್ರವೀಣ್ ಕುಮಾರ್ ಅವರು ಈ ಹಿಂದೆ ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಯಾಗಿ, ಸಾಗರ ಉಪ ವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.