ಮಡಿಕೇರಿ, ಜು. 18: ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್‍ನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ತಾ. 20ರಂದು (ನಾಳೆ) ಬೆಳಿಗ್ಗೆ 9.30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭ 2018ರಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದ್ದು, ಸದಸ್ಯರೊಂದಿಗೆ ಈ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷೆ ಚೌರೀರ ಕಾವೇರಿ ಪೂವಯ್ಯ ಅವರು ಕೋರಿದ್ದಾರೆ.