ಮಡಿಕೇರಿ, ಜು. 19: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ತಾ.22 ರಂದು ನಡೆಯಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಅತ್ಯುತ್ತಮ ವರದಿಗಾಗಿ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಚ್.ಟಿ. ಅನಿಲ್, ಸುನೀಲ್ ಪೊನ್ನೆಟಿ, ಕಾಯಪಂಡ ಶಶಿ ಸೋಮಯ್ಯ, ಬಾಚರಣಿಯಂಡ ಅನು ಕಾರ್ಯಪ್ಪ, ವಿಘ್ನೇಶ್ ಭೂತನಕಾಡು, ಆರ್.ಆರ್. ಮನೋಜ್, ಎಂ.ಎನ್. ನಾಸಿರ್, ಹಿರಿಕರ ರವಿ, ವಿಜಯ್ ಹಾನಗಲ್, ಸಣ್ಣುವಂಡ ಕಿಶೋರ್ ನಾಚಪ್ಪ, ಎಚ್.ಜೆ. ರಾಕೇಶ್ ಕೊಡಗು, ಪುತ್ತರಿರ ಕರುಣ್ ಕಾಳಯ್ಯ, ಕಿಶೋರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಎ.ಆರ್. ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ. ತಲಕಾವೇರಿ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಹಿರಿಯ ಸಾಹಿತಿ ಭಾರದ್ವಾಜ್ ಆನಂದತೀರ್ಥ ಪಾಲ್ಗೊಳ್ಳಲಿದ್ದಾರೆ.