*ಗೋಣಿಕೊಪ್ಪ, ಜು. 19: ತಿತಿಮತಿ, ದೇವಮಚ್ಚಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಬಾರ್ಡ್ ಯೋಜನೆಯಡಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕೊಠಡಿಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ಸರ್ಕಾರ ವಿವಿಧ ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ಮೂಲಕ ಶಿಕ್ಷಣವಂತರಾಗಿ ಮಾಡಬೇಕು ಎಂದರು. ವಿದ್ಯಾರ್ಥಿಗಳು ದಿನದ ಪಠ್ಯ ಪ್ರವಚನಗÀಳನ್ನು ಅಂದೇ ಕಲಿತು ಉತ್ತಮ ಫಲಿತಾಂಶ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು
ತಾ.ಪಂ. ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಉಪಸ್ಥಿತರಿದ್ದರು. ಜಿಲ್ಲಾ ಬಿ.ಜೆ.ಪಿ. ವರ್ತಕ ಪ್ರಕೊಷ್ಠ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಫೆಡ್ರೆಷನ್ ನಿರ್ದೇಶಕ ಮಲ್ಲಂಡ ಮಧು ದೇವಯ್ಯ, ಸ್ಥಳೀಯರಾದ ಮನು ನಂಜಪ್ಪ, ಮುಖ್ಯೋಪಾಧ್ಯಾಯಿನಿ ಭವಾನಿ, ಶಿಕ್ಷಕರು ಹಾಜರಿದ್ದರು.