ಮಡಿಕೇರಿ, ಜು. 19: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ಬೆಂಗಳೂರಿನಲ್ಲಿ ಅಭಿನಂದಿಸಿದರು.
ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಕುರಿತು ಚರ್ಚಿಸಲಾಗಿದ್ದು, ಅಲ್ಪಸಂಖ್ಯಾತರ ಘಟಕದ ಬಲವರ್ಧನೆಯ ಬಗ್ಗೆ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ ಎಂದು ಯಾಕೂಬ್ ತಿಳಿಸಿದ್ದಾರೆ.
ಅಭಿನಂದಿಸುವ ಸಂದರ್ಭ ಡಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಮಹಮ್ಮದ್ ಹನೀಫ್, ಪ್ರಮುಖರಾದ ವೀರಾಜಪೇಟೆಯ ಅಶ್ರಫ್, ನೌಶಾದ್ ಮತ್ತಿತರರು ಹಾಜರಿದ್ದರು.