ಮಡಿಕೇರಿ, ಜು. 19: ದಕ್ಷಿಣ ಕೊಡಗಿನ ನಾಲ್ಕೇರಿ ವಿಭಾಗದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ವ್ಯಾಪಕ ಹಾನಿಯುಂಟಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಲಕ್ಷ್ಮಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ತೋಟ, ಗದ್ದೆಗಳು ಜಲಾವೃತಗೊಂಡಿವೆ. ರಸ್ತೆ ಸಂಪರ್ಕ ಕಡಿತಗೊಂಡಿರುವದರಿಂದ ಸ್ಥಳೀಯರು 15ರಿಂದ 20 ಕಿ.ಮೀ. ಹೆಚ್ಚು ದೂರ ಕ್ರಮಿಸಿ ಬದಲಿ ರಸ್ತೆಯ ಮೂಲಕ ತೆರಳುವಂತಾಗಿದೆ. ಈ ವಿಭಾಗದಲ್ಲಿ ಇನ್ನೂ ಹಲವಾರು ಸಮಸ್ಯೆಗಳು ಇದ್ದು, ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಖುದ್ದಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕೆಂದು ಅಲ್ಲಿನ ಗ್ರಾಮಸ್ಥರು ‘ಶಕ್ತಿ’ ಮೂಲಕ ಆಗ್ರಹಿಸಿದ್ದಾರೆ.