ಮಡಿಕೇರಿ, ಜು. 19: ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಪೊಮ್ಮಕ್ಕಡ ಕೂಟದ ತಂಡ ಗೋಣಿಕೊಪ್ಪದ ದೇವರಪುರ ಅಮೃತವಾಣಿ ಶಾಲೆಗೆ ಭೇಟಿ ನೀಡಿ ವಾಕ್ ಮತ್ತು ಶ್ರವಣ ದೋಷದ ವಿದ್ಯಾರ್ಥಿಗಳೊಂದಿಗೆ ಬೆರೆಯಿತು. ಒಳಾಂಗಣ ಕ್ರೀಡೆ ಮತ್ತು ಸಾಂಸ್ಕøತಿ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ಸಾಹ ಮೂಡಿಸಿದ ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಪಠ್ಯ ಮತ್ತು ಪಠ್ಯೇತರ ಚಟುವಟಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.
ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಚೆರಿಯಪಂಡ ಇಮ್ಮಿ ಉತ್ತಪ್ಪ ಮತ್ತು ತಂಡ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಅಮೃತವಾಣಿ ಶಾಲೆಗೆ ರೂ. 30 ಸಾವಿರ ಧನ ಸಹಾಯ ಮಾಡಿದರು. ಅಲ್ಲದೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಕೂಟದ ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ಕಾರ್ಯದರ್ಶಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಅರ್ಚನಾ ಮುದ್ದಪ್ಪ, ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.