ಸುಂಟಿಕೊಪ್ಪ, ಜು. 20: ಸುಂಟಿಕೊಪ್ಪ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 1 ವಾರದಿಂದ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಸಮಸ್ಯೆ ಎದುರಾದ ಹಿನ್ನೆಲೆ ಸುಂಟಿಕೊಪ್ಪ ಪಂಚಾಯಿತಿ ಆಡಳಿತ ಮಂಡಳಿಯವರು ಜನರೇಟರ್ ಮೂಲಕ ಕುಡಿಯುವ ನೀರು ಸರಬರಾಜುಗೊಳಿಸಲು ಕ್ರಮ ಕೈಗೊಳ್ಳುವಂತಾಗಿದೆ.

ಕಳೆದ 10 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಗಾಳಿಯಿಂದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮರಗಳು ಧರೆಗುರುಳಿದ್ದ ಪರಿಣಾಮ ನೂರಾರೂ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‍ಫಾರಂಗಳು ಹಾನಿಗೀಡಾಗಿದ್ದು ಹಲವು ಬಡಾವಣೆ ಮತ್ತು ಪಟ್ಟಣಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು. ಇದರಿಂದ ಪಂಚಾಯಿತಿ ವ್ಯಾಪ್ತಿಯ 7 ವಾರ್ಡ್‍ಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರಿದ್ದವು. ಇದನ್ನು ಮನಗಂಡ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ ಹಾಗೂ ಸಿಬ್ಬಂದಿಗಳು ಪಂಚಾಯಿತಿ ಬೋರ್‍ವೆಲ್‍ಗಳಿಗೆ ಜನರೇಟರ್ ಅಳವಡಿಸಿ ಟ್ಯಾಂಕಿಗೆ ನೀರು ತುಂಬಿಸುವ ಮೂಲಕ ಸಾರ್ವಜನಿಕರಿಗೆ ವಿತರಿಸಲು ಕ್ರಮಕೈಗೊಂಡರು.

ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಪಂಚಾಯಿತಿ ಸದಸ್ಯರುಗಳಾದ ಬಿ.ಎಂ.ಸುರೇಶ್, ನಾಗರತ್ನ ಮತ್ತಿತರರು ಇದ್ದರು.