ಸೋಮವಾರಪೇಟೆ, ಜು. 20: ತಾಲೂಕು ಒಕ್ಕಲಿಗರ ಯುವ ವೇದಿಕೆ ವತಿಯಿಂದ 5ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ತಾ. 21 ರಂದು (ಇಂದು) ತಾಕೇರಿ ಗ್ರಾಮದಲ್ಲಿ ನಡೆಯಲಿದೆ.
ಗ್ರಾಮದ ಸಮುದಾಯಭವನದ ಸಮೀಪವಿರುವ ನೀಲಮ್ಮ ಎಂಬವರಿಗೆ ಸೇರಿದÀ ಗದ್ದೆಯಲ್ಲಿ ಬೆಳಿಗ್ಗೆ 9ಗಂಟೆಗೆ ಕ್ರೀಡಾಕೂಟವನ್ನು ಉದ್ಯಮಿ ಹರಪಳ್ಳಿ ರವೀಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ಬಿ.ಜೆ.ದೀಪಕ್, ಪ್ರಮುಖರಾದ ಕೊತ್ನಳ್ಳಿ ಅರುಣ್ ಕುಮಾರ್, ಗಿರೀಶ್ ಮಲ್ಲಪ್ಪ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ತಾಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ, ತಾಕೇರಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಪಿ.ಪೊನ್ನಪ್ಪ, ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಸದಸ್ಯ ಬಿ.ಬಿ.ಸತೀಶ್, ಮತ್ತಿತರರು ಭಾಗವಹಿಸಲಿದ್ದಾರೆ.
ಒಕ್ಕಲಿಗ ಜನಾಂಗ ಬಾಂಧವವರು ಕೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್(6 ಜನ), ಗದ್ದೆ ಓಟ, ಮಹಿಳೆಯರಿಗೆ ಥ್ರೋಬಾಲ್ (6 ಜನ), ಗದ್ದೆ ಓಟ, ಹಗ್ಗ ಜಗ್ಗಾಟ ಸ್ಪರ್ಧೆಗಳಿರುತ್ತವೆ.