ಕುಶಾಲನಗರ, ಜು 23: ಇಲ್ಲಿನ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಣೆ ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ಟಿ. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ ವಿತರಿಸ ಲಾಯಿತು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ರಾಣಿ, ಶಿಕ್ಷಕರಾದ ಪ್ರಕಾಶ್, ಗಾಯಿತ್ರಿ. ಇಂದಿರಾ, ಕಮಲಾ, ಉಷಾ, ಲತಾ, ನೀಲಮ್ಮ, ಸರಳಾಮಣಿ, ಕುಸುಮ, ಭಾರತಿ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.