ಮಡಿಕೇರಿ, ಜು. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಡಪದ ಅಪ್ಪಣ್ಣರವರ ಜಯಂತೋತ್ಸವ ಸಮಾರಂಭವು ಜುಲೈ, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣ ದಲ್ಲಿ ನಡೆಯಲಿದೆ.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಆಯನೂರು ಮಂಜುನಾಥ್, ಬೊಜೇಗೌಡ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮತ್ತು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವೆಂಕಟೇಶ್, ಎಚ್.ಎನ್. ಸರಸ್ವತಿ, ಡಿ.ಎಡ್. ಕಾಲೇಜಿನ ಪ್ರಾಂಶುಪಾಲ ಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.