ಕೂಡಿಗೆ, ಜು. 25: ಕುಶಾಲನಗರ ಸಮೀಪದ ಆನೆ ಕಾಡು ರಕ್ಷಿತಾರಣ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಸಂತೋಷ, ಕಿಶನ್ ಎಂಬ ಪ್ರವಾಸಿಗರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರತಾಪ್ ಎಂಬ ಯುವಕ ವಾಹನವನ್ನು ಓಡಿಸುತ್ತಿದ್ದ, ಪವನ್ ಎಂಬ ಸಹ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕುಶಾಲನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.