ಮಡಿಕೇರಿ, ಜು. 26: ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಲು ಕಾರಣಕರ್ತರಾದ ಗಾಳಿಬೀಡು ಪ್ರೌಢಶಾಲಾ ಶಿಕ್ಷಕರನ್ನು ಲಯನ್ಸ್ ಕ್ಲಬ್ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ತಾ. 28 ರಂದು ಸನ್ಮಾನಿಸಲಾಗುವದೆಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ದಾಮೋದರ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ.
ಸಮಾಜ ಸೇವಕ ಟಿ.ಆರ್. ವಾಸುದೇವ, ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷÀ ಕೆ.ಎಂ.ಗಣೇಶ್, ದಸಂಸ ತಾಲೂಕು ಸಂಘಟನಾ ಸಂಚಾಲಕ ಎ.ಪಿ. ದೀಪಕ್ ಮತ್ತಿತರರು ಹಾಜರಿರುವರು ಎಂದು ದಿವಾಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭ ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಗುವದೆಂದು ಅವರು ಹೇಳಿದ್ದಾರೆ.