ಕುಶಾಲನಗರ, ಜು. 27: ಕರ್ನಾಟಕ ಕಾವಲು ಪಡೆ ವತಿಯಿಂದ ಕುಶಾಲನಗರ ಪಟ್ಟಣದ ವ್ಯಾಪ್ತಿಯಲ್ಲಿ ಗುಂಡಿ ಬಿದ್ದು ದುಸ್ಥಿಯಲ್ಲಿರುವ ರಸ್ತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಗಿಡ ನೆಟ್ಟು ಪ್ರತಿಭಟನೆ ನಡೆಸಲಾಯಿತು.

ಸ್ಥಳೀಯ ಗೌಡ ಸಮಾಜ ರಸ್ತೆಯ ಕೋಣಮಾರಿಯಮ್ಮ ದೇವಾಲಯದ ಬಳಿ ರಸ್ತೆಯಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಕೂಡಲೇ ರಸ್ತೆ ದುರಸ್ತಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ.ಪಂ. ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಮಳೆಗಾಲ ಕಳೆದ ಕೂಡಲೇ ದುರಸ್ತಿ ಮಾಡುವ ಬಗ್ಗೆ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ ಜಿಲ್ಲಾ ಕಾರ್ಯದರ್ಶಿ ಕುಮಾರ ಮತ್ತಿತರರು ಇದ್ದರು.