ಕುಶಾಲನಗರ, ಜು. 27: ನ್ಯೂ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಕೊಡಗು ಕಬಡ್ಡಿ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆಯಿತು.
ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಕಬಡ್ಡಿ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಎಂ.ಎ. ಗಿರೀಶ್ ನೂತನ ಅಸೋಸಿಯೇಷನ್‍ಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಸೂಕ್ತ ಪ್ರೋತ್ಸಾಹದ ಅಗತ್ಯವಿದೆ. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚು ಆಯೋಜಿಸುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕಿದೆ. ಗ್ರಾಮೀಣ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ತಮ್ಮ ಸಾಮಥ್ರ್ಯ ಪ್ರದರ್ಶನಕ್ಕೆ ವೇದಿಕೆ ಒದಗಿಸುವದು ಅಗತ್ಯವಿದೆ ಎಂದರು.
ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಎಂ.ಹೆಚ್. ಮೂಸ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಪರಿಚಯ ನಡೆಯಿತು.
ಈ ಸಂದರ್ಭ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕೆ.ಬಿ. ಸತೀಶ್, ಉಪಾಧ್ಯಕ್ಷರುಗಳಾದ ಡಾ. ಸದಾಶಿವ ಎಸ್. ಪಲ್ಲೇದ್, ಪುರುಷೋತ್ತಮ್ ಪೆರಾಜೆ, ಸತೀಶ್ ಮಂದಣ್ಣ, ಸುಭಾಶ್ ಕರ್ಕಳ್ಳಿ, ಸಹ ಸಂಘಟನಾ ಕಾರ್ಯದರ್ಶಿ ಆದಂ ಮತ್ತಿತರರು ಇದ್ದರು. ಸದಾಶಿವ ಎಸ್. ಪಲ್ಲೇದ್ ಪ್ರಾಸ್ತಾವಿಕ ನುಡಿಗಳಾಡಿದರು, ಕೆ.ಬಿ. ಸತೀಶ್ ಸ್ವಾಗತಿಸಿದರು, ಆದಂ ನಿರೂಪಿಸಿದರು.