ಮಡಿಕೇರಿ, ಜು. 27 : ಟ್ರೈಕಲರ್ ಕೋಚಿಂಗ್ ಸೆಂಟರ್ ವತಿಯಿಂದ ತಾ. 29ರಂದು ಮಡಿಕೇರಿಯ ಬಾಲಭವನದಲ್ಲಿ ನವೋದಯ ಮತ್ತು ಸೈನಿಕ ಶಾಲೆಯ ಪ್ರವೇಶ ಪಡೆಯ ಬಯಸುವ ಮಕ್ಕಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿರುವದಾಗಿ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ ಪಟೇಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ, ಪ್ರಸಕ್ತ 5ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಾಗುವದು ಎಂದರು. ಸುಮಾರು 200ರಷ್ಟು ವಿದ್ಯಾರ್ಥಿಗಳನ್ನು ಕಾರ್ಯಾಗಾರಕ್ಕೆ ನೋಂದಣಿ ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ ಇನ್ನೂ ಆಸಕ್ತ ವಿದ್ಯಾರ್ಥಿಗಳು, ಪೋಷಕರಿದ್ದಲ್ಲಿ ತಾ. 29ರಂದು ನೇರವಾಗಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿ. ಕಾರ್ಯಾಗಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ. ಬಳಿಕ ಪೋಷಕರಿಗೆ ಮಾರ್ಗದರ್ಶನ ನೀಡಲಾಗುವದು ಎಂದು ತಿಳಿಸಿದರು.
ಸೈನಿಕ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶವನ್ನು ನೀಡಲಾಗುತ್ತದೆ. ಈ ಹಂತದಲ್ಲಿ ನಡೆಸುವ ಪ್ರವೇಶ ಪರೀಕ್ಷೆಗೆ ಯಾವ ರೀತಿ ಸಿದ್ಧಗೊಳ್ಳಬೇಕು ಎನ್ನುವ ಬಗ್ಗೆಯೂ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುತ್ತದೆಂದು ಮೋಕ್ಷಿತ್ ಪಟೇಲ್ ತಿಳಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಹೆಚ್ಚಿನ ಮಾಹಿತಿ ಇರುವದಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಾಗಾರವನ್ನು ನಡೆಸುವ ಮೂಲಕ ಮಕ್ಕಳಿಗೆ ಮಾಹಿತಿ ನೀಡಲಾಗುತ್ತದೆ. ಕಳೆದ ಬಾರಿ ಸಂಸ್ಥೆಯಿಂದ ನಡೆಸಿದ ತರಬೇತಿ ಕಾರ್ಯಕ್ರಮಗಳ ಸದುಪಯೋಗ ಪಡೆದ ಐವರು ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದು, ಇವರನ್ನು ಕಾರ್ಯಾಗಾರದಲ್ಲಿ ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತದೆ ಎಂದು ತಿಳಿಸಿದರು.
ಮುಂದಿನ ಸೆಪ್ಟೆಂಬರ್‍ನಿಂದ ಸಂಸ್ಥೆ ಐಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವದಕ್ಕೆ ಪೂರಕವಾದ ತರಬೇತಿಯನ್ನು ನೀಡಲಿದೆ. ಇಂತಹ ತರಬೇತಿಗಳ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಲೆಕ್ಕ ಮತ್ತು ಸಮಸ್ಯೆಗಳನ್ನು ಬಿಡಿಸುವ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ವಿನಯ್, ಶಿಕ್ಷಕಿ ಸ್ಪರ್ಶ ಹಾಗೂ ವ್ಯವಹಾರ ಅಭಿವೃದ್ಧಿ ವಿಭಾಗದ ಅರ್ಜುನ್‍ದೇವ್ ಉಪಸ್ಥಿತರಿದ್ದರು.