ಮಡಿಕೇರಿ, ಜು. 27: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಇವರ ವತಿಯಿಂದ 2018-19ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಯೋಜನೆ (ವಿದ್ಯಾಭ್ಯಾಸ ಸಾಲ), ಶ್ರಮಶಕ್ತಿ ಸಾಲ ಹಾಗೂ ಸಹಾಯಧನ ಯೋಜನೆ, ಮೈಕ್ರೋಲೋನ್, ಪಶು ಸಂಗೋಪನಾ ಯೋಜನೆ (ಗ್ರಾಮೀಣ ಪ್ರದೇಶದ ಮಹಿಳೆಯರಿಗೆ), ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆ, ಅಲ್ಪಸಂಖ್ಯಾತರ ಟ್ಯಾಕ್ಸಿ ಕಲ್ಯಾಣ ಯೋಜನೆ, ಗೃಹ ನಿರ್ಮಾಣ ಮೇಲಿನ ಬಡ್ಡಿ ಸಹಾಯಧನ ಯೋಜನೆ, ಕೃಷಿ ಭೂಮಿ ಖರೀದಿ ಯೋಜನೆ, ಆಟೋಮೊಬೈಲ್ ಸರ್ವೀಸ್ ತರಬೇತಿ ಹಾಗೂ ಸಾಲ ಯೋಜನೆ, ಮನೆ ಮಳಿಗೆ, ಪ್ರವಾಸಿ ಸಾಲ ಯೋಜನೆಗಳಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ/ಟoಚಿಟಿ/ಟogiಟಿ.ಚಿsಠಿx ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ರಾಮಮಂದಿರದ ಹಿಂಭಾಗ, ಹೊಟೇಲ್ ಹಿಲ್ ವ್ಯೂ ಹತ್ತಿರ, ಹಿಲ್ ರಸ್ತೆ, ಮಡಿಕೇರಿ, ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಎಲ್ಲಾ ಯೋಜನೆಗಳನ್ನು ಆನ್‍ಲೈನ್ ನೋಂದಣಿ ಮಾಡಿದ ಮೇಲೆ ಪ್ರಿಂಟೌಟ್ ತೆಗೆದು ಸಂಬಂಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಖುದ್ದಾಗಿ ಸಲ್ಲಿಸುವದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಕಚೇರಿ. ದೂ.ಸಂ: 08272-220449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ಎನ್. ನಾಗೇಂದ್ರ ತಿಳಿಸಿದ್ದಾರೆ.

ಪ್ರೋತ್ಸಾಹ ಧನಕ್ಕೆ

ನಾಪೋಕ್ಲು: ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಅಮ್ಮಕೊಡವ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಏಳನೇ ತರಗತಿ ಮೇಲ್ಪಟ್ಟ ಜನಾಂಗದ ವಿದ್ಯಾರ್ಥಿಗಳು ಅಂಕಪಟ್ಟಿ ವ್ಯಾಸಂಗ ಪ್ರಮಾಣ ಪತ್ರ ಅಥವಾ ಶುಲ್ಕ ಪಾವತಿಸಿದ ನಕಲು ಪ್ರತಿಯೊಂದಿಗೆ ಆಗಸ್ಟ್ 15 ರೊಳಗಾಗಿ ಆಯಾಯ ಗ್ರಾಮದ ಸಂಘದ ಪ್ರತಿನಿಧಿಗೆ ಸಲ್ಲಿಸುವಂತೆ ಸಂಘದ ಗೌರವ ಕಾರ್ಯದರ್ಶಿ ಉಮೇಶ್ ಕೇಚಮಯ್ಯ ತಿಳಿಸಿದ್ದಾರೆ. ಅಥವಾ ಗೌರವ ಕಾರ್ಯದರ್ಶಿ ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘ ಕುಟ್ಟಂದಿ: (9480425773) ಇವರನ್ನು ಸಂಪರ್ಕಿಸಬಹುದು.

ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ

ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ. 10 ಸಾವಿರ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವದು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಯಿತವಾದ ಕ್ರೀಡಾ ಸಂಸ್ಥೆಗಳು 1.1.2017 ರ ನಂತರ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಅಂದರೆ 1.1.2017 ರಿಂದ 31.12.2017 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವದು. ಅರ್ಜಿಗಳನ್ನು ಕ್ರೀಡಾ ಇಲಾಖೆಯಿಂದ ಪಡೆದು ಆಗಸ್ಟ್ 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ (ಮ್ಯಾನ್ಸ್ ಕಾಂಪೌಂಡ್) ಮಡಿಕೇರಿ ಇವರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272-228985 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.