ಸೋಮವಾರಪೇಟೆ, ಜು. 27: ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಂಚಿತ ರಾಗದಂತೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಕರೆ ನೀಡಿದರು.
ಪಟ್ಟಣದಲ್ಲಿನ ಸ್ಕೌಟ್ಸ್ ಭವನದಲ್ಲಿ ಆಯೋಜಿಸಲಾಗಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸೋಮವಾರಪೇಟೆ ತಾಲೂಕು ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ವಿದ್ಯಾರ್ಥಿಗಳು ತೊಡಗಿಸಿ ಕೊಂಡು ಅದರಲ್ಲಿನ ವಿವಿಧ ಹಂತದ
ಸೋಮವಾರಪೇಟೆ, ಜು. 27: ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಂಚಿತ ರಾಗದಂತೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಕರೆ ನೀಡಿದರು.
ಪಟ್ಟಣದಲ್ಲಿನ ಸ್ಕೌಟ್ಸ್ ಭವನದಲ್ಲಿ ಆಯೋಜಿಸಲಾಗಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸೋಮವಾರಪೇಟೆ ತಾಲೂಕು ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ವಿದ್ಯಾರ್ಥಿಗಳು ತೊಡಗಿಸಿ ಕೊಂಡು ಅದರಲ್ಲಿನ ವಿವಿಧ ಹಂತದ ಗೈಡ್ಸ್ನಲ್ಲಿ ಶಿಕ್ಷಕರು ತಮ್ಮನ್ನು ತೊಡಗಿಸಿಕೊಂಡಷ್ಟು ತಾವೂ ಮೇಲ್ಮಟ್ಟಕ್ಕೆ ಬೆಳೆಯಬಹುದು. ಸರಕಾರ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಿದ್ದು, ಪ್ರತಿ ಶಾಲೆಗೆ ಭೇಟಿ ನೀಡುವ ಅವರುಗಳು ದಳಗಳ ಪ್ರಗತಿಯ ಬಗ್ಗೆ ವರದಿಯನ್ನು ಸರಕಾರಕ್ಕೆ ಕಳುಹಿಸಲಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ತಮ್ಮ ಶಾಲೆಗಳ ದಳಗಳನ್ನು ಇನ್ನಷ್ಟು ಚುರುಕುಗೊಳಿಸಿಕೊಳ್ಳಬೇಕೆಂದರು.
ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಬಿ.ಎ. ಭಾಸ್ಕರ್ ಮಾತನಾಡಿ, ತಾಲೂಕಿನ ಶಿಕ್ಷಕರ ಮನವಿಯಂತೆ ಮುಂದಿನ ದಿನಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ, ಪುನಶ್ಚೇತನ ಶಿಬಿರವನ್ನು ಆಯೋಜಿಸ ಲಾಗುತ್ತದೆ. ಮುಂದಿನ ಡಿಸೆಂಬರ್ ಅಂತ್ಯದೊಳಗೆ ತಾಲೂಕು ಮಟ್ಟದ ಶಿಬಿರವನ್ನು ಆಯೋಜಿಸಲಾಗುವದು. ಈ ನಿಟ್ಟಿನಲ್ಲಿ ಶಿಕ್ಷಕರು ದಳಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು. ಸಂಸ್ಥೆಯ ವಾರ್ಷಿಕ ವರದಿಯನ್ನು ಹಟ್ಟಿಹೊಳೆ ನಿರ್ಮಲ ಕಾನ್ವೆಂಟ್ನ ಶಿಕ್ಷಕಿ ಅನುಷಾ, ಹಿಂದಿನ ಮಹಾಸಭೆ ವರದಿ ಹಾಗೂ ಲೆಕ್ಕ ಪತ್ರವನ್ನು ಸಂಸ್ಥೆಯ ಪ್ರ.ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್ ಮಂಡಿಸಿದರು. ಗೌಡಳ್ಳಿ ಶಾಲೆಯ ಶಿಕ್ಷಕಿ ಡಿ.ಎಸ್. ಆಶಾ ವಾರ್ಷಿಕ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಖಾಯಂ ಆಹ್ವಾನಿತರುಗಳಾದ ನಳಿನಿ ಗಣೇಶ್, ಉಷಾ ತೇಜಸ್ವಿ, ಜಿ.ಎಂ.ಪಿ. ಶಾಲೆಯ ಪದವೀಧರ ಮುಖ್ಯ ಶಿಕ್ಷಕಿ ಎನ್.ಜೆ. ಅಣ್ಣಮ್ಮ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ರಂಜಿತ್, ಸಹ ಕಾರ್ಯದರ್ಶಿ ಚಂದ್ರಕಲಾ ಉಪಸ್ಥಿತರಿದ್ದರು.