ಮಡಿಕೇರಿ, ಜು. 28: ಇಲ್ಲಿಗೆ ಸಮೀಪದ 2ನೇ ಮೊಣ್ಣಂಗೇರಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾ. 26ರಂದು ನಡೆದಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ನಿವಾಸಿ ಚಂದ್ರಮ್ಮ (55) ಎಂಬವರು ಮನೆ ಸನಿಹದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ. ಈ ಕುರಿತು ಪುತ್ರ ಬಾಲಕೃಷ್ಣ ನೀಡಿದ ಪುಕಾರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹೇಳಲಾಗಿದೆ.