ಕುಶಾಲನಗರ, ಜು. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದಾಪಟ್ಟಣ ಕಾರ್ಯಕ್ಷೇತ್ರಕ್ಕೆ ಒಳಪಡುವ ಸದಸ್ಯರುಗಳಿಗೆ ಕೇಂದ್ರ ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸುವ ಕಾರ್ಯಕ್ರಮ ನಡೆಯಿತು.

ಸ್ಥಳೀಯ ಗಂಧದಕೋಟೆಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಅಟಲ್ ಪೆನ್ಷನ್ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಲಾಯಿತು.

ವಲಯ ಮೇಲ್ವಿಚಾರಕರಾದ ಕೆ.ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲರಾಗುವಂತೆ ಕರೆ ನೀಡಿದರು. ತಾಂತ್ರಿಕ ಸಹಾಯಕ ತರಬೇತಿದಾರರಾದ ಶಶಿಕಲಾ ಹಾಗೂ ಭಾಗ್ಯ ಸದಸ್ಯರುಗಳಿಗೆ ತರಬೇತಿ ನೀಡಿದರು. ಈ ಸಂದರ್ಭ ಸೇವಾ ಪ್ರತಿನಿಧಿ ಚಂದ್ರಾವತಿ ಇದ್ದರು.