ಮಡಿಕೇರಿ, ಜು. 31: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಮೆಡಿಕಲ್ ಮತ್ತು ಎಂಜಿನಿಯರಿಂಗ್, ಸ್ನಾತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1,ಎಸ್.ಸಿ &amdiv; ಎಸ್.ಟಿ ರೂ. 2.50 ಲಕ್ಷ ಪ್ರವರ್ಗ-2ಎ, 2ಬಿ,3ಎ,3ಬಿ,ಇತರ ಹಿಂದುಳಿದ ವರ್ಗದವರಿಗೆ ರೂ.1.00 ಲಕ್ಷ ಗಳಾಗಿರುತ್ತವೆ.

ಆನ್ ಲೈನ್ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನವಾಗಿರುತ್ತದೆ. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿನ್ನು ನೋಡಬಹುದು.