ಮಡಿಕೇರಿ, ಜು. 29: ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಲು ಕಾರಣಕರ್ತರಾದ ಗಾಳಿಬೀಡು ಪ್ರೌಢಶಾಲಾ ಶಿಕ್ಷಕರನ್ನು ದಲಿತ ಸಂಘರ್ಷ ಸಮಿತಿ ಮತ್ತು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ದಾಮೋದರ್ ವಿದ್ಯಾರ್ಥಿಗಳು ಓದಿನ ಜೊತೆಗೆ ಜೀವನದ ಬಗ್ಗೆ ಉತ್ತಮ ಗುರಿಯನ್ನು ಹೊಂದಿರÀಬೇಕು ಎಂದರು. ತಾಲೂಕು ಕಾರ್ಯ ನಿರ್ವಹಣಾ ಧಿಕಾರಿ ಲಕ್ಷ್ಮೀ ಚಂದ್ರಶೇಖರ್ ಮಾತನಾಡಿ ವಿದ್ಯಾರ್ಥಿಗಳು ನಿಖರ ಗುರಿ ಹಾಗೂ ಸದೃಢ ಮನೋಭಾವವನ್ನು ಹೊಂದಿದಾಗ ಮಾತ್ರ ಶೈಕ್ಷಣಿಕ ಸಾಧನೆ ಸಾಧ್ಯವೆಂದು ಅಭಿಪ್ರಾಯಪಟ್ಟರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ ಕಣ್ಣಿಗೆ ಕಾಣುವ ಜೀವಂತ ದೇವರುಗಳೆಂದರೆ ಶಿಕ್ಷಕರು ಎಂದು ಬಣ್ಣಿಸಿದರು. ಸರಕಾರಿ ಶಾಲೆಗಳಲ್ಲೂ ಶೇ. 100 ರಷ್ಟು ಫಲಿತಾಂಶ ಗಳಿಸಬಹುದು ಎನ್ನುವದನ್ನು ಶಿಕ್ಷಕರು ಸಾಬೀತು ಪಡಿಸಿದ್ದಾರೆ. ವಿದ್ಯಾರ್ಥಿಗಳ ಏಳಿಗೆಗಾಗಿ ಪರಿಶ್ರಮ ಪಡುವ ಶಿಕ್ಷಕರನ್ನು ಗೌರವಿಸುವದು ಪ್ರತಿಯೊಬ್ಬರ ಜವಬ್ದಾರಿಯಾಗ ಬೇಕೆಂದು ದಿವಾಕರ್ ತಿಳಿಸಿದರು.

ಸಮಾಜ ಸೇವಕ ಟಿ.ಆರ್. ವಾಸುದೇವ, ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷÀ ಕೆ.ಎಂ. ಗಣೇಶ್, ನಗರಸಭಾ ಸದಸ್ಯ ಅಮಿನ್ ಮೊಹಿಸ್ಸಿನ್, ಎಸ್‍ಡಿಪಿಐ ನಗರಾಧ್ಯಕ್ಷ ಖಲೀಲ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸೋಮಣ್ಣ, ಖಜಾಂಚಿ ನಂಜಪ್ಪ, ದಸಂಸ ತಾಲೂಕು ಸಂಘಟನಾ ಸಂಚಾಲಕ ಎ.ಪಿ. ದೀಪಕ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಗಳನ್ನು ವಿತರಿಸಲಾಯಿತು.