ಮಡಿಕೇರಿ, ಜು.31 : ಜಾತ್ಯಾ ತೀತ ಜನತಾ ದಳದ ಮಡಿಕೇರಿ ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವದಾಗಿ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಪಕ್ಷದ ಮುಖಂಡರು ಹಾಗೂ ಮಾಜಿ ಸಚಿವ ಬಿ.ಎ.ಜೀವಿಜಯ ಅವರಿಗೆ ರಾಜೀನಾಮೆ ಸಲ್ಲಿಸಿರುವ ದಾಗಿ ಹೇಳಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಅವರು ರಾಜೀನಾಮೆ ನೀಡಿರುವದ ರಿಂದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು, ಪಕ್ಷದ ಪುನರ್ ರಚನೆ ಮತ್ತು ಪುನರ್ ಸಂಘಟನೆ ಬಲಯುತವಾಗಬೇಕೆನ್ನುವ ಉದ್ದೇಶದಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವದಾಗಿ ರಾಜೇಶ್ ಯಲ್ಲಪ್ಪ ಸ್ಪಷ್ಟಪಡಿಸಿದ್ದಾರೆ.