ಮಡಿಕೇರಿ, ಜು. 31: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಪಿ. ಕಾವೇರಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸಿ. ಜೆನಿಫರ್ ಲೋಲಿಟ ಇತರರು ಪಾಲ್ಗೊಳ್ಳಲಿದ್ದಾರೆ.