ಸೋಮವಾರಪೇಟೆ, ಜು. 31: ಶನಿವಾರಸಂತೆಯ ಪೆಟ್ರೋಲ್ ಬಂಕ್ನಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಶ್ನಿಸಲು ತೆರಳಿದ ಸಾರ್ವಜನಿಕರು ಹಾಗೂ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆಯ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಸಂಘಟನೆಯ ತಾಲೂಕು ಅಧ್ಯಕ್ಷ ಸಿ.ಬಿ. ಸುರೇಶ್ ಶೆಟ್ಟು, ತಾ. 21 ರಂದು ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ ತುಂಬಿಸಿಕೊಂಡ ಹಲವಷ್ಟು ವಾಹನಗಳು ದುರಸ್ತಿಗೀಡಾಗಿದ್ದು, ಈ ಬಗ್ಗೆ ಪ್ರಶ್ನಿಸಲು ತೆರಳಿದ ಸಂಘಟನೆಯ ಶನಿವಾರಸಂತೆ ಭಾಗದ ಕಾರ್ಯಕರ್ತರ ವಿರುದ್ಧ ಪೆಟ್ರೋಲ್ ಬಂಕ್ನ ಮಾಲೀಕ, ತಮ್ಮ ಕೆಲಸಗಾರರ ಮೂಲಕ ಸುಳ್ಳು ಜಾತಿ ನಿಂದನೆ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಗೋಷ್ಠಿಯಲ್ಲಿ ಸಂಘಟನೆಯ ತಾಲೂಕು ಕಾರ್ಯದರ್ಶಿ ರಫೀಕ್, ನಗರ ಘಟಕದ ಅಧ್ಯಕ್ಷ ದೊರೆ, ಉಪಾಧ್ಯಕ್ಷ ರಂಗಸ್ವಾಮಿ, ಯುವ ಘಟಕದ ನಿತಿನ್ ಉಪಸ್ಥಿತರಿದ್ದರು.