ಸೋಮವಾರಪೇಟೆ, ಆ. 2: ಕರ್ನಾಟಕ ರಾಜ್ಯ ಸರಕಾರಿ ಎನ್‍ಪಿಎಸ್ ನೌಕರರ ಸಂಘದ ತಾಲೂಕು ಘಟಕದ ಸಾಮಾನ್ಯ ಸಭೆ ತಾ. 4 ರಂದು ಅಪರಾಹ್ನ 2.30ಕ್ಕೆ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ನವೀನ್‍ಕುಮಾರ್ ತಿಳಿಸಿದ್ದಾರೆ.

ಸಂಘದ ಅಧ್ಯಕ್ಷ ಬಿ.ಎಂ. ಸತೀಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎನ್‍ಪಿಎಸ್ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ಹಾಗೂ ಸಮಸ್ಯೆಗಳ ಇತ್ಯರ್ಥಕ್ಕೆ ಮಾಡಬೇಕಾದ ಹೋರಾಟಗಳ ಬಗ್ಗೆ ರೂಪು-ರೇಷೆಗಳನ್ನು ಸಿದ್ದಗೊಳಿಸಲಾಗುತ್ತದೆ. ಎನ್‍ಪಿಎಸ್ ಯೋಜನೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ನೌಕರರು ಸಭೆಗೆ ಆಗಮಿಸಿ ಸಲಹೆ, ಸೂಚನೆಗಳನ್ನು ನೀಡಬಹುದೆಂದು ನವೀನ್ ಕುಮಾರ್ ತಿಳಿಸಿದ್ದಾರೆ.