ಮಡಿಕೇರಿ, ಆ. 2: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಎರಡು ವರ್ಷದ ಡಿ.ಇಎಲ್.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯ ಶಿಕ್ಷಕರ ತರಬೇತಿ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಯು ತಾ. 8 ರವರೆಗೆ ನಡೆಯುವದರಿಂದ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಈ ಸಂಸ್ಥೆಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು ಟಯಡ್ ಕೂಡಿಗೆ, ದೂರವಾಣಿ ಸಂಖ್ಯೆ 08276-278287 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೂಡಿಗೆಯ ಪದನಿಮಿತ್ತ ಉಪ ನಿರ್ದೇಶಕರು ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.