ಸಿದ್ದಾಪುರ, ಆ. 6: ಮಕ್ಕಳ ಸಹಾಯವಾಣಿ 1098 ರ ವತಿಯಿಂದ ಪಾಲಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯ ಬಗ್ಗೆ ಮಾಹಿತಿ ನೀಡಲಾಯಿತು. ಬಾಲ ಕಾರ್ಮಿಕರು, ಮಕ್ಕಳ ಹಕ್ಕುಗಳ ಉಲ್ಲಂಘನೆ ಕಂಡು ಬಂದಾಗ ಮಕ್ಕಳ ಸಹಾಯವಾಣಿ 1098 ಕ್ಕೆ ಮಾಹಿತಿ ನೀಡಲು ತಿಳಿಸ ಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳಾದ ಕುಸುಮ, ಶೋಭಲಕ್ಷ್ಮಿ ಮಾಹಿತಿ ನೀಡಿದರು. ಈ ಸಂದರ್ಭ ಸ್ತ್ರೀಶಕ್ತಿ ಸಂಘದ ವಲಯ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಇದ್ದರು.