ಕೂಡಿಗೆ, ಆ. 6: ಕೂಡಿಗೆ ಗ್ರಾಮ ಪಂಚಾಯಿತಿ ಹೆದ್ದಾರಿಯ ಸಮೀಪದಲ್ಲಿರುವ ಹಾರಂಗಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಪಕ್ಕದಲ್ಲಿ ಕಸದ ರಾಶಿ ಹಾಕಲಾಗಿದ್ದು, ಚೆಲ್ಲಾಪಿಲ್ಲಿಯಾಗಿ ನದಿಗೆ ಸೇರುತ್ತಿದೆ. ದುರ್ನಾಥ ಬೀರುತ್ತಿದೆ. ಈ ವ್ಯಾಪ್ತಿಯ ಗ್ರಾಮಸ್ಥರ ದೂರಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ನಿವಾಸಿಗಳ ಪರವಾಗಿ ನಿವೃತ್ತ ಪೋಲಿಸ್ ಅಧಿಕಾರಿ ಗೋಪಾಲ್ ಆಗ್ರಹಿಸಿದ್ದಾರೆ.