ಮಡಿಕೇರಿ ಆ. 6 : ಜಿಲ್ಲೆಯ ಜನಸಾಮಾನ್ಯರು ಹಾಗೂ ದುರ್ಬಲರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರಲ್ಲಿ ಬಹುಜನ ಸಮಾಜ ಪಾರ್ಟಿ ಮನವಿ ಮಾಡಿದೆ. ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮೌರ್ಯ, ಖಜಾಂಚಿ ದಿಲೀಪ್ ಕುಮಾರ್, ಕಾರ್ಯದರ್ಶಿ ಮೊಣ್ಣಪ್ಪ, ರಾಜಣ್ಣ ಹಾಗೂ ಪ್ರಮುಖರು ನಗರಕ್ಕೆ ಆಗಮಿಸಿದ್ದ ಉಸ್ತುವಾರಿ ಸಚಿವರನ್ನು ಅಭಿನಂದಿಸಿದರು.