ವೀರಾಜಪೇಟೆ, ಆ. 6: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಬರುವ ನಾಗರಿಕರಿಗೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ತಿದ್ದುಪಡಿಗೆ ಅವಕಾಶವಿರುತ್ತದೆ. ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ತಿದ್ದುಪಡಿ ಗೊಳಿಸಲು ಬಯಸುವ ನಾಗರಿಕರು ಸಂಬಂದಿಸಿದ ದಾಖಲೆ ಹಾಗೂ ನಮೂನೆಗಳನ್ನು ತಾ. 10ರ ಒಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 08274-257332 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.