ಸುಂಟಿಕೊಪ್ಪ, ಆ.14: ಭಾರೀ ಮಳೆ ಸುರಿಯುತ್ತಿದ್ದು ಕೆದಕಲ್ ಸಮೀಪದ ಭದ್ರಕಾಳೇಶ್ವರಿ ದೇವಸ್ಥಾನದ ಬಳಿಯಲ್ಲಿ ರಾಷ್ಟ್ರಿಯ ಹೆದ್ದಾರಿ ಬದಿಯು ಕುಸಿಯಲಾರಂಭಿಸಿ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ವರ್ಷಾಧಾರೆಗೆ ಹಲವು ಗ್ರಾಮಗಳ ಸಂಚಾರವೇ ಕಡಿತಗೊಂಡಿದೆ. ಇದೇ ರೀತಿಯ ಭೀತಿಯು ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪ ಸಮೀಪದ ಕೆದಕಲ್ ಭದ್ರಕಾಳೇಶ್ವರಿ ದೇವಸ್ಥಾನದ ಬಳಿ ಎದುರಾಗಿದೆ. ಇದರಿಂದ ಸಂಪರ್ಕ ಕಡಿದುಕೊಳ್ಳುವ ಭೀತಿ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಲಾಗಿದ್ದು ಸಂಚಾರ ಸಂದರ್ಭ ಯಾವದೇ ರೀತಿಯ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.