ಮಡಿಕೇರಿ, ಆ.14 : ಕೊಡಗು ಜಿಲ್ಲೆಯಲ್ಲಿ ಸದ್ಯದಲ್ಲಿಯೇ ಚಿತ್ರನಟ ಉಪೇಂದ್ರ ಅವರ ನೇತೃತ್ವದ ಪ್ರಜಾಕೀಯ ಪಕ್ಷ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸ ಲಿದ್ದು, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗಸೂಚಿಗಳನ್ನು ತಯಾರಿಸಲಿದೆ ಎಂದು ಪಕ್ಷದ ಜಿಲ್ಲಾ ಪ್ರಮುಖ ಬಡ್ಡನ ಚಿರಾಗ್ ಸೋಮಣ್ಣ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಪ್ರಜಾಕೀಯ ಪಕ್ಷ ವಾರ್ಷಿಕೋತ್ಸವವನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಭ್ರಷ್ಟಾಚಾರ ಮುಕ್ತ ವ್ಯವಸ್ಥೆಯ ಕುರಿತು ಮಾರ್ಗದರ್ಶನ ಮಾಡಿದ್ದಾರೆÉ.