ಸೋಮವಾರಪೇಟೆ, ಆ. 14: ತಾ. 29ರಂದು ನಡೆಯಲಿರುವ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ವಾರ್ಡ್ 10 ಮಹದೇಶ್ವರ ಬ್ಲಾಕ್ ಸಾಮಾನ್ಯ ಮಹಿಳೆ ಮೀಸಲಾತಿಯಿದ್ದು ಇಲ್ಲಿಂದ ಗೀತಾ ಹರೀಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಗೀತಾ ಅವರಿಗೆ ಪಕ್ಷದ ಟಿಕೆಟ್ ತಪ್ಪಿದ್ದರಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಈ ವಾರ್ಡ್‍ನಿಂದ ದಿವ್ಯ ಮೋಹನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.