ಮಡಿಕೇರಿ, ಆ.23 : ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು 2018-19ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೂಲಕ ಪ್ರವಾಸಿ ಟ್ಯಾಕ್ಸಿ ವಿತರಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿತ್ತು.
ಆದರೆ ಕೊಡಗು ಜಿಲ್ಲೆಯಲ್ಲಿಯಾಗುತ್ತಿರುವ ಪ್ರಕೃತಿ ವಿಕೋಪದಿಂದಾಗಿ ನಿಗದಿತ ಅವಧಿಯಲ್ಲಿ ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅಸಾಧ್ಯವಾಗುತ್ತಿರುವದನ್ನು ಪರಿಗಣಿಸಿ, ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇೀರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇಲ್ಲಿ ಸಂಪರ್ಕಿಸಲು ಕೋರಿದೆ.