ಮಡಿಕೇರಿ, ಆ. 23: ಜಿಲ್ಲೆಯಲ್ಲಿ ಮಳೆ ಹಾನಿಯಿಂದಾಗಿ ಉಂಟಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಬರಲು ಸಂಪರ್ಕ ಸಾಧ್ಯವಿಲ್ಲದಂತಹ ಬಾಲಕಿಯರಿಗೆ ತಾತ್ಕಾಲಿಕವಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ (ಕೂರ್ಗ್ ಇಂಟರ್ ನ್ಯಾಷನಲ್ ಹೋಟೆಲ್ ಪಕ್ಕ) ಇಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ನಿಲಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಲಯ ಪಾಲಕರ ದೂರವಾಣಿ ಸಂಖ್ಯೆ: 7204320214 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08272-225528/ 220214ನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.