ಮಂಗಳೂರು, ಆ.27 : ಈಗಾಗಲೇ ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಎರಡು ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮತ್ತೊಮ್ಮೆ ಮಳೆ ಯಾಗಲಿದೆ ಎಂದು ಹೇಳಿದ್ದಾರೆ.