ಮೂರ್ನಾಡು, ಆ. 28: ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ವರ್ಷಂಪ್ರತಿ ಸೆ. 3 ರಂದು ಮೂರ್ನಾಡುವಿನಲ್ಲಿ ಮೂರ್ನಾಡು ಸಹಕಾರ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಆಯೋಜಿಸಿಕೊಂಡು ಬರಲಾಗುತ್ತಿದ್ದ ಕ್ರೀಡಾಕೂಟವನ್ನು ಈ ಬಾರಿ ಪ್ರಾಕೃತಿಕ ವಿಕೋಪದ ಹಿನ್ನೆಲೆ ರದ್ದುಪಡಿಸಲಾಗಿದೆ. ಕ್ರೀಡಾಕೂಟಕ್ಕೆ ತಗಲುತ್ತಿದ್ದ ವೆಚ್ಚವನ್ನು ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಗುವದು ಎಂದು ಸಂಘದ ಅಧ್ಯಕ್ಷ ಪಳಂಗಂಡ ಅಪ್ಪಣ್ಣ ಅವರು ತಿಳಿಸಿದ್ದಾರೆ.