ಸುಂಟಿಕೊಪ್ಪ, ಆ. 28: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ನಿರಾಶ್ರಿತರಾದವರಿಗೆ ಸಮರೋಪರಾದಿಯಲ್ಲಿ ಹರಿದು ಬರುತ್ತಿರುವ ಪರಿಹಾರ ಸಾಮಗ್ರಿಗಳನ್ನು ಸಮರ್ಪಕ ರೀತಿಯಲ್ಲಿ ಅರ್ಹ ನಿರಾಶ್ರಿತರಿಗೆ ವಿತರಿಸಲು ಕ್ರಮ ಕೈಗೊಳ್ಳುವ ಮೂಲಕ ಅವರ ಮುಂದಿನ ಜೀವನವನ್ನು ಕಟ್ಟಿಕೊಳ್ಳುವಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ. ಉಸ್ಮಾನ್ ಅವರು ಮನವಿ ಮಾಡಿದ್ದಾರೆ.