ಸೋಮವಾರಪೇಟೆ, ಆ. 28: ಭಾರೀ ಭೂಕುಸಿತದಿಂದ ಹಟ್ಟಿಹೊಳೆ ವ್ಯಾಪ್ತಿಯಲ್ಲಿ ರಸ್ತೆಗಳು ಇಲ್ಲವಾಗಿದ್ದು, ಈ ಪ್ರದೇಶದಲ್ಲಿರುವ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಶಾಲೆ ಪ್ರಾರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಾ. 30ರಂದು (ನಾಳೆ) ಪೋಷಕರ ಸಭೆ ಕರೆಯಲಾಗಿದೆ ಎಂದು ಗ್ರಾ.ಪಂ. ಸದಸ್ಯ ಮಜೀದ್ ತಿಳಿಸಿದ್ದಾರೆ.
ತಾ. 30ರಂದು ಪೂರ್ವಾಹ್ನ 10 ಗಂಟೆಗೆ ಹಟ್ಟಿಹೊಳೆಯ ನಿರ್ಮಲ ವಿದ್ಯಾಭವನದ ಆವರಣದಲ್ಲಿ ಸಭೆ ನಡೆಯಲಿದ್ದು, ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ, ವಾಹನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಗುವದು ಎಂದು ಮಜೀದ್ ತಿಳಿಸಿದ್ದಾರೆ.