ಕುಶಾಲನಗರ, ಆ. 28: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಆರಾಧನಾ ಪೂಜಾ ಮಹೋತ್ಸವ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್, ಸೋಮಶೇಖರ್ ಭಟ್ ವಿಶೇಷ ಪೂಜಾ ವಿಧಿಗಳನ್ನು ನೆರವೇರಿಸಿದರು. ಪಟ್ಟಣದ ನೂರಾರು ಮಂದಿ ಭಕ್ತಾದಿಗಳು ಪೂಜೋತ್ಸವದಲ್ಲಿ ಪಾಲ್ಗೊಂಡು ರಾಯರ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ ನಡೆಯಿತು.