ಮಡಿಕೇರಿ, ಆ. 29: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2017 ರಿಂದ ಡಿಸೆಂಬರ್ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ ಗುಣಮಟ್ಟವನ್ನು ಪರಿಗಣಿಸಿ ಮುದ್ರಕರಿಗೆ ಕನ್ನಡ ಪುಸ್ತಕ ಮುದ್ರಣ ಸೊಗಸು-2017 ಬಹುಮಾನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮುದ್ರಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಮುದ್ರಕರ ಹೆಸರು ಈ ಎಲ್ಲ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು-560002, ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ 080-22484516/22107704 ಇಲ್ಲಿ ಸಂಪರ್ಕಿಸಬಹುದಾಗಿದೆ.